ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ2 ಆರೋಪಿ ದರ್ಶನ್ ಸೆಪ್ಟೆಂಬರ್ 21 ರಂದು ಬೆಂಗಳೂರಿನ 57ನೇ ಸಿಸಿಹೆಚ್ ಕೋರ್ಟ್ ಗೆ ಜಾಮೀನಿಗಾಗಿ ಅರ್ಜಿಯನ್ನು ಸಲ್ಲಿಸಿದ್ದರು. ಅದರ ವಿಚಾರಣೆ ಕೈಗೆತ್ತಿಕೊಂಡ ಕೋರ್ಟ್ ವಿಚಾರಣೆಯನ್ನು ಸೋಮವಾರ ಸೆಪ್ಟಂಬರ್ 23 ಅಂದರೆ ಇಂದಿಗೆ ಮುಂದೂಡಿಕೆ ಮಾಡಿತ್ತು. ಇಂದು ಅರ್ಜಿಯ ವಿಚಾರಣೆ ನಡೆಯಲಿದೆ
ಇನ್ನು ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್ ಹಾಗೂ ಇತರ ರೌಡಿಶೀಟರ್ಗಳಿಗೆ ವಿಶೇಷ ಆತಿಥ್ಯ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ರೌಡಿಶೀಟರ್ ವಿಲ್ಸನ್ಗಾರ್ಡನ್ ನಾಗ ಸೇರಿ 20 ಮಂದಿ ಕೈದಿಗಳನ್ನು ಬೆಳಗಾವಿಯ ಹಿಂಡಲಗಾ ಜೈಲಿಗೆ ರವಿವಾರ ಸ್ಥಳಾಂತರಿಸಲಾಗಿದೆ.
