kerala-logo

ಬೆನ್ನು ನೋವಿನಿಂದ ಬಳಲುತ್ತಿರುವ ಡಿ ಬಾಸ್ ದರ್ಶನ್ ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ದಾಖಲು


ಬಳ್ಳಾರಿ; ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅವರು ಭಾರೀ ಬೆನ್ನು ನೋವಿನಿಂದ ಬಳಲುತ್ತಿದ್ದಾರೆ. ಹಾಗಾಗಿ ಅವರು ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಬೆನ್ನು ನೋವಿನಿಂದ ಬಳಲುತ್ತಿರುವ ನಟ ದರ್ಶನ್‌ಗೆ ವಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ವೈದ್ಯರು ಸೂಚನೆ ನೀಡಿದ್ದರು. ಅದರಂತೆ ಬಳ್ಳಾರಿಯಲ್ಲಿ ನಟ ದರ್ಶನ್ ಎಂಆರ್ ಐ ಸ್ಕ್ಯಾನಿಂಗ್ ಮಾಡಿಸಲು ಒಪ್ಪಿಕೊಂಡಿದ್ದಾರೆ. ಚಿಕಿತ್ಸೆ ನೀಡಲಾಗುತ್ತಿದೆ.
ಕಳೆದ ಕೆಲವು ದಿನಗಳ ಹಿಂದೆ ಕೂಡ ಅವರಿಗೆ ಬೆನ್ನು ನೋವು ಕಾಣಿಸಿಕೊಂಡಿದ್ದು, ಈ ವೇಳೆ ವಿಮ್ಸ್ ಆಸ್ಪತ್ರೆಯ ವೈದ್ಯರು ಜೈಲಿಗೆ ಭೇಟಿ ನೀಡಿ ನಟ ದರ್ಶನ್ ಅವರ ಆರೋಗ್ಯವನ್ನು ತಪಾಸಣೆ ಮಾಡಿದ್ದರು. ಈ ವೇಳೆ ವೈದ್ಯರು ಆಸ್ಪತ್ರೆಗೆ ದಾಖಲಾಗಿ ಸ್ಕ್ಯಾನಿಂಗ್ ಮಾಡಿಸಿಕೊಳ್ಳುವಂತೆ ಸಲಹೆ ನೀಡಿದ್ದರು.

Kerala Lottery Result
Tops