kerala-logo

ಆರೋಪಿ ನಟ ದರ್ಶನ್‌ಗೆ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ; ಸಾಮಾಜಿಕ ಜಾಲತಾಣದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಫೋಟೋ ವೈರಲ್


ಬೆಂಗಳೂರು: ನಟ ದರ್ಶನ್‌ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಮೂಲಗಳು ತಿಳಿಸಿದ್ದು, ಇದೀಗ ದರ್ಶನ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಫೋಟೋ ವೈರಲ್ ಆಗಿದೆ.
ತುರ್ತು ಚಿಕಿತ್ಸೆಗಾಗಿಯೇ ಹೈಕೋರ್ಟ್ ನಟ ದರ್ಶನ್‌ಗೆ 6 ವಾರಗಳ ಕಾಲ ಮಧ್ಯಂತರ ಜಾಮೀನು ಮಂಜೂರು ಮಾಡಲಾಗಿದ್ದು, ಕಳೆದ 4 ವಾರಗಳಿಂದ ಬಿಜಿಎಸ್‌ ಆಸ್ಪತ್ರೆಯಲ್ಲಿ ಪಿಸಿಯೋಥೆರಪಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವೈದ್ಯಕೀಯ ಮೂಲಗಳು ತಿಳಿಸಿವೆ.
ಇನ್ನೊಂದೆಡೆ ಆರೋಪಿ ನಟ ದರ್ಶನ್ ರೆಗ್ಯೂಲರ್‌ ಬೇಲ್‌ಗೆ ಅರ್ಜಿ ಸಲ್ಲಿಸಿದ್ದು, ಅದರ ವಿಚಾರಣೆ ಕೋರ್ಟ್‌ನಲ್ಲಿ ನಡೆಯುತ್ತಿದೆ.
ಇನ್ನು 9 ದಿನಗಳು ಕಳೆದರೆ ಮತ್ತೆ ದರ್ಶನ್ ಜೈಲಿಗೆ ವಾಪಸ್ಸಾಗಬೇಕು. ಆದರೆ ಇದೀಗ ಮಾತ್ರ ದರ್ಶನ್‌ ಅವರು ಚಿಕಿತ್ಸೆ ಪಡೆಯುತ್ತಿರುವ ಫೋಟೋ ಜಾಲತಾಣದಲ್ಲಿ ಹರಿದಾಡುತ್ತಿದೆ.

Kerala Lottery Result
Tops