ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮಧ್ಯಂತರ ಜಾಮೀನು ಪಡೆದು ಸದ್ಯ ಬೆಂಗಳೂರಿನ ಕೆಂಗೇರಿ ಬಳಿ ಇರುವ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಟ ದರ್ಶನ್ ಅವರಿಗೆ ಬಿಗ್ ಶಾಕ್ ಎದುರಾಗಿದೆ.ದರ್ಶನ್ ಅವರಿಗೆ ಹೈಕೋರ್ಟ್ ಮಧ್ಯಂತರ ಜಾಮೀನು ನೀಡಿರೋದನ್ನು ಪ್ರಶ್ನಿಸಿ, ಪೊಲೀಸರು ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಅನುಮತಿ ಕೋರಿದ್ದರು. ಇದೀಗ ರಾಜ್ಯ ಸರ್ಕಾರ ಮೇಲ್ಮನವಿ ಸಲ್ಲಿಕೆಗೆ ಅನುಮತಿ ನೀಡಿದೆ.
ಜಾಮೀನು ಮೇಲೆ ಹೊರಗೆ ಬಂದ್ರೂ ನಟ ದರ್ಶನ್ ಗೆ ರಿಲೀಫ್ ಇಲ್ಲದಂತಾಗಿದೆ. ನಟ ದರ್ಶನ್ ಅವರು ಬೆನ್ನು ನೋವಿನ ಸಮಸ್ಯೆ ತಿಳಿಸಿ ಹೈಕೋರ್ಟ್ ನಿಂದ ಜಾಮೀನು ಪಡೆದುಕೊಂಡಿದ್ದರು. ಈ ಒಂದು ಆದೇಶವನ್ನು ಪ್ರಶ್ನಿಸಿ ಇದೀಗ ಬೆಂಗಳೂರಿನ ಪೊಲೀಸರು ಸುಪ್ರೀಂಕೋರ್ಟಿಗೆ ಮೇಲ್ಮನವಿ ಸಲ್ಲಿಸಲು ಸಿದ್ಧತೆ ಮಾಡಿಕೊಂಡಿದ್ದಾರೆ. ಸದ್ಯದಲ್ಲೇ ಪೊಲೀಸರು ಸುಪ್ರೀಂಕೋರ್ಟಿಗೆ ಮೇಲ್ಮನವಿ ಅರ್ಜಿ ಸಲ್ಲಿಸಲಿದ್ದಾರೆ ಎನ್ನಲಾಗಿದೆ.
