kerala-logo

ಯಾವ ಅಂಶವನ್ನು ಇಟ್ಟುಕೊಂಡು ದರ್ಶನ್ ಪರ ವಕೀಲರು ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ ಗೊತ್ತಾ?


ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಬಳ್ಳಾರಿ ಜೈಲಿನಲ್ಲಿರುವ ನಟ ದರ್ಶನ್ ನಿನ್ನೆ ಜಾಮೀನು ಕೋರಿ ಬೆಂಗಳೂರಿನ 57ನೇ ಸಿಸಿಹೆಚ್ ಕೋರ್ಟ್ ಗೆ ಅರ್ಜಿಯನ್ನು ಸಲ್ಲಿಸಿದ್ದರು. ಅದರ ವಿಚಾರಣೆಯನ್ನು ನ್ಯಾಯಾಧೀಶರು ಸೆಪ್ಟಂಬರ್ 23ಕ್ಕೆ ಅಂದರೆ ನಾಳೆಗೆ ಮುಂದೂಡಿದ್ದಾರೆ.
ಇನ್ನು ದರ್ಶನ್ ಅವರ ವಕೀಲರು ಯಾವ ವಿಚಾರವನ್ನು ಇಟ್ಟುಕೊಂಡು ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ ಗೊತ್ತಾ? ಅರ್ಜಿಯಲ್ಲಿ ರೇಣುಕಾ ಸ್ವಾಮಿ ಕೊಲೆಗೂ ಹಾಗೂ ದರ್ಶನ್ಗು ಯಾವುದೇ ರೀತಿಯಾದಂತಹ ಸಂಬಂಧ ಇಲ್ಲ ಎಂಬ ಮಾಹಿತಿ ಉಲ್ಲೇಖಿಸಿ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೂ ದರ್ಶನ್ ಗೂ ಯಾವುದೇ ಸಂಬಂಧವಿಲ್ಲ. ಆದರೆ ಸುಮ್ಮನೆ ದರ್ಶನ್ ಹೆಸರನ್ನು ಎಳೆದು ತರಲಾಗಿದೆ. ರೇಣುಕಾಸ್ವಾಮಿ ಅಪಹರಣ ಮಾಡಲು ನಾನು ಸೂಚನೆ ನೀಡಿಲ್ಲ. ರೇಣುಕಾಸ್ವಾಮಿ ಹತ್ಯೆಯಲ್ಲಿ ನನ್ನ ಪಾತ್ರವಿಲ್ಲ. ಎ10 ಆರೋಪಿ ವಿನಯ್ ಹಾಗೂ ಎ3 ಆರೋಪಿ ಪವನ್ ಸೂಚನೆ ಮೇರೆಗೆ ಅಪಹರಣ ಮಾಡಲಾಗಿದೆ ಎಂದು ಜಾಮೀನು ಅರ್ಜಿಯಲ್ಲಿ ಉಲ್ಲೇಖ ಮಾಡಲಾಗಿದೆ.
ಇನ್ನು ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿ ಆಗಿರುವ ದರ್ಶನ್ ತಮ್ಮ ವಕೀಲರ ಮೂಲಕ ನಿನ್ನೆ ಮೊದಲ ಬಾರಿಗೆ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಧೀಶರು, ವಿಚಾರಣೆಯನ್ನು ನಾಳೆಗೆ ಮುಂದೂಡಿ ಆದೇಶ ಹೊರಡಿಸಿದ್ದಾರೆ. ಹಾಗಾಗಿ ನಟ ದರ್ಶನ್ ಅವರ ಜಾಮೀನು ಅರ್ಜಿಯ ಭವಿಷ್ಯ ನಾಳೆ ನಿರ್ಧಾರವಾಗಲಿದೆ.

Kerala Lottery Result
Tops