kerala-logo

ವಾಹನಗಳಲ್ಲಿ ನಟ ದರ್ಶನ್ ಕೈದಿ ಸಂಖ್ಯೆ ಸ್ಟಿಕ್ಕರ್ ಹಾಕಿ ಕೊಂಡವರಿಗೆ ವಾರ್ನ್ ಮಾಡಿದ ಆರ್ ಟಿಓ


ಬೆಂಗಳೂರು  ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಳ್ಳಾರಿ ಜೈಲು ಪಾಲಾಗಿರುವ ನಟ ದರ್ಶನ್ ಗೆ ಜೈಲು ಅಧಿಕಾರಿಗಳು ಕೈದಿ ನಂಬರ್ 511 ನೀಡಿದ್ದಾರೆ. ಆದರೆ ದರ್ಶನ್ ಅಭಿಮಾನಿಗಳು ವಾಹನಗಳ ದರ್ಶನ್ ಕೈದಿ ನಂಬರ್ ಸೇರಿದಂತೆ ತರಹೇವಾರಿ ಸ್ಟಿಕ್ಕರ್‌ಗಳನ್ನು ಅಂಟಿಸಿ ಅಭಿಮಾನ ಮೆರೆಯುತ್ತಿದ್ದಾರೆ.ಅಂತಹ ಅಭಿಮಾನಿಗಳಿಗೆ ಆರ್‌ಟಿಓ ಖಡಕ್ ವಾರ್ನ್ ಮಾಡಿದೆ.
ದರ್ಶನ್  ಅವರ ಅಭಿಮಾನಿಗಳು ವಾಹನಗಳ ಮೇಲೆ ತರಹೇವಾರಿ ಬರಹ ಬರೆದು ಅಂದಾಭಿಮಾನ ಮೆರೆಯುತ್ತಿದ್ದಾರೆ. ದರ್ಶನ್‌ಗೆ ನೀಡಿರುವ ಕೈದಿ ಸಂಖ್ಯೆ, ಸೇರಿದಂತೆ ವಾಹನಗಳ ಮೇಲೆ ಪ್ರಚೋದನಕಾರಿ, ಬೇರೆ ನಟರ ಫ್ಯಾನ್ಸ್ ಗೆ ಟಾಂಗ್ ಕೊಡುವಂತ ಬರಹಗಳ ಸ್ಟಿಕರ್‌ ಅಳವಡಿಸಿಕೊಳ್ಳುತ್ತಿದ್ದಾರೆ. ಹೀಗಾಗಿ ದರ್ಶನ್ ಅಭಿಮಾನಿಗಳಿಗೆ ಸಾರಿಗೆ ಆಯುಕ್ತರು ಖಡಕ್ ಎಚ್ಚರಿಕೆ ನೀಡಿದ್ದಾರೆ. ಬೇಕಾಬಿಟ್ಟಿಯಾಗಿ ವಾಹನಗಳ ಮೇಲೆ ಸ್ಟಿಕ್ಕರ್ ಅಂಟಿಸಿದ್ರೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಹೆಚ್ಚುವರಿ ಸಾರಿಗೆ ಆಯುಕ್ತ ಸಿ. ಮಲ್ಲಿಕಾರ್ಜುನ್ ಎಚ್ಚರಿಕೆ ನೀಡಿದ್ದಾರೆ.
ನಟ ದರ್ಶನ್ ಬಳ್ಳಾರಿ ಜೈಲಿಗೆ ಹೋದರೂ ನಟ ದರ್ಶನ್ ಕ್ರೇಜ್ ಮಾತ್ರ ಕಡಿಮೆ ಆಗಿಲ್ಲ. ದರ್ಶನ್ ಗೆ ಬಳ್ಳಾರಿ ಜೈಲಿನಲ್ಲಿ ನೀಡಿದ್ದ 511 ಖೈದಿ ನಂಬರ್ ನ್ನು ಅಭಿಮಾನಿಗಳು ಟ್ರೆಂಡ್ ಮಾಡುತ್ತಿದ್ದು, ಆಟೋ , ಬೈಕ್ ಸೇರಿದಂತೆ ತಮ್ಮ ವಾಹನಗಳ ಮೇಲೆ ಕೈದಿ ನಂ.511 ಎಂದು ಸ್ಟಿಕ್ಕರ್ ಹಾಕಿಸಿಕೊಳ್ಳುತ್ತಿದ್ದಾರೆ.