kerala-logo

ಇಂದು ಹೈಕೋರ್ಟ್ ನಲ್ಲಿ ಮನೆಯೂಟಕ್ಕಾಗಿ ದರ್ಶನ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ


ಬೆಂಗಳೂರು: ಇಂದು ಹೈಕೋರ್ಟ್ ನಲ್ಲಿ ಮನೆಯೂಟಕ್ಕಾಗಿ ದರ್ಶನ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಯಲಿದೆ. ಮೊನ್ನೆ ಮನೆಯೂಟಕ್ಕಾಗಿ ಹೈಕೋರ್ಟ್ ಗೆ ಸಲ್ಲಿಸಿದ್ದ ಅರ್ಜಿಯನ್ನು ದರ್ಶನ್ ವಾಪಾಸ್ ಪಡೆದಿದ್ದರು. ತಾಂತ್ರಿಕ ಕಾರಣಗಳಿಂದಾಗಿ ಆ ಅರ್ಜಿಯನ್ನು ವಾಪಾಸ್ ಪಡೆದಿದ್ದರು. ನಿನ್ನೆ ಮತ್ತೆ ತಮಗೆ ಮನೆ ಊಟ ನಿರಾಕರಿಸಿದ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯದ ಆದೇಶ ರದ್ದುಪಡಿಸಬೇಕು ಹಾಗೂ ಮನೆಯೂಟ, ಹಾಸಿಗೆ ಹಾಗೂ ಓದಲು ಪುಸ್ತಕ  ತರಿಸಿಕೊಳ್ಳಲು ಅನುಮತಿ ನೀಡಬೇಕೆಂದು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಅಧೀಕ್ಷಕರಿಗೆ ಸೂಚಿಸುವಂತೆ ಕೋರಿ ನಟ ದರ್ಶನ್‌ ಪರ ವಕೀಲರು ಹೈಕೋರ್ಟ್‌ಗೆ ಮಂಗಳವಾರ ಹೊಸದಾಗಿ ಅರ್ಜಿ ಸಲ್ಲಿಸಿದ್ದಾರೆ.
ಈ ವಿಚಾರವಾಗಿ ದರ್ಶನ್‌ ಹೈಕೋರ್ಟ್‌ಗೆ ತಕರಾರು ಅರ್ಜಿ ಸಲ್ಲಿಸಿದ್ದು, ಅರ್ಜಿಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಅಧೀಕ್ಷಕರು ಮತ್ತು ಕಾಮಾಕ್ಷಿಪಾಳ್ಯದ ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌ ಅವರನ್ನು ಪ್ರತಿವಾದಿಯನ್ನಾಗಿ ಮಾಡಲಾಗಿದೆ. ಈ ಅರ್ಜಿಯು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಏಕ ಸದಸ್ಯ ನ್ಯಾಯಪೀಠದ ಮುಂದೆ ಇಂದು ವಿಚಾರಣೆಗೆ ನಿಗದಿಯಾಗಿದೆ. ಇಂದಾದರು ದರ್ಶನ್ ಗೆ ಮನೆಯೂಟದ ಭಾಗ್ಯ ಸಿಗುತ್ತಾ ಅಂತಾ ಕಾದು ನೋಡ್ಬೇಕು.

Kerala Lottery Result
Tops