ನಟ ದರ್ಶನ್ ಕೆಲವೇ ಕೆಲವು ಆಪ್ತರ ಸಮ್ಮುಖದಲ್ಲಿ ತಮ್ಮ 48ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ.
ದರ್ಶನ್ ಪತ್ನಿ ವಿಜಯಲಕ್ಷ್ಮಿ ಆತ್ಮೀಯರಿಗಷ್ಟೇ ಆಹ್ವಾನ ನೀಡಿದ್ದರು. ರಾತ್ರಿ ದರ್ಶನ್ ನಿವಾಸದಲ್ಲೇ ನಡೆದ ಹುಟ್ಟುಹಬ್ಬದ ಸರಳ ಸಂಭ್ರಮದಲ್ಲಿ ನಿರ್ಮಾಪಕಿ ಶೈಲಜಾ ನಾಗ್, ಸಂಗೀತ ನಿರ್ದೇಶಕ ಹರಿಕೃಷ್ಣ, ನಟಿ ರಕ್ಷಿತಾ ಪ್ರೇಮ್, ನಟ ಧನ್ವಿರ್, ದರ್ಶನ್ ಸಹೋದರ ದಿನಕರ್ ತೂಗುದೀಪ್ ಸೇರಿದಂತೆ ಹಲವರು ಪಾಲ್ಗೊಂಡಿದ್ದರು. ಕೇಕ್ ಕತ್ತರಿಸಿ, ದರ್ಶನ್‌ಗೆ ಶುಭ ಹಾರೈಸಿದ್ದಾರೆ.
