kerala-logo

ನಟ ದರ್ಶನ್ ಸೇರಿದಂತೆ ಇತರೆ ಎಲ್ಲಾ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿ ಆಗಸ್ಟ್.28ರವರೆಗೆ ವಿಸ್ತರಣೆ


ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲಿನಲ್ಲಿರುವ ದರ್ಶನ್ ಸೇರಿದಂತೆ ಎಲ್ಲಾ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿ ಇಂದಿಗೆ ಅಂತ್ಯವಾದ ಹಿನ್ನೆಲೆ ಅವರೆಲ್ಲರನ್ನು ವಿಡೀಯೋ ಕಾನ್ಫರೆನ್ಸ್ ಮೂಲಕ ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ ನ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಯಿತು. ಈ ವೇಳೆ ಕೋರ್ಟ್ ಅವರಿಗೆ ಆಗಸ್ಟ್.28ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.
ಪ್ರಕರಣದ ವಿಚಾರಣೆ ನಡೆಸಿದ  ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ ನ ನ್ಯಾಯಾಧೀಶರಾದಂತ ವಿಶ್ವನಾಥ ಸಿ ಗೌಡರ್ ಅವರು, ನಟ ದರ್ಶನ್ ಸೇರಿದಂತೆ ಎಲ್ಲಾ ಆರೋಪಿಗಳಿಗೆ ಆಗಸ್ಟ್.28ರವರೆಗೆ ನ್ಯಾಯಾಂಗ ಬಂಧನವನ್ನು ವಿಸ್ತರಿಸಿ ಆದೇಶಿಸಿದ್ದಾರೆ. ಹಾಗಾಗಿ ಸದ್ಯಕ್ಕೆ ಡಿ ಗ್ಯಾಂಗ್ ಗೆ ಜೈಲೇ ಗತಿ ಎಂಬತಾಂಗಿದೆ.

Kerala Lottery Result
Tops