ಮೈಸೂರು : ನಾಳೆಯಿಂದ ಡೆವಿಲಿ ಸಿನಿಮಾದ ಶೂಟಿಂಗ್ ನಲ್ಲಿ ನಟ ದರ್ಶನ್ ಭಾಗಿಯಾಗಲಿದ್ದಾರೆ.
ಸಿನಿಮಾ ಶೂಟಿಂಗ್ ನಲ್ಲಿ ಭಾಗಿಯಾಗಲು ನಟ ದರ್ಶನ್ ಗೆ ಡಿಸಿಪಿ ಮುತ್ತುರಾಜ್ ಅನುಮತಿ ನೀಡಿದ್ದು, ನಾಳೆಯಿಂದ ನಟ ದರ್ಶನ್ ಮೈಸೂರಿನಲ್ಲಿ ಡೆವಿಲ್ ಚಿತ್ರದ ಚಿತ್ರೀಕರಣದಲ್ಲಿ ಭಾಗಿಯಾಗಲಿದ್ದಾರೆ.
ಮೈಸೂರಿನ ಸರ್ಕಾರಿ ಅತಿಥಿಗೃಹದಲ್ಲಿ ಚಿತ್ರೀಕರಣಕ್ಕೆ ಪ್ಲಾನ್ ಮಾಡಲಾಗಿದೆ. ಮಾರ್ಚ್ 12ರಿಂದ 14ರವರೆಗೆ ಅತಿಥಿಗೃಹದಲ್ಲಿ ಚಿತ್ರೀಕರಣ ನಡೆಯಲಿದೆ. ಪೊಲೀಸ್ ಬಿಗಿ ಭದ್ರತೆಯಲ್ಲಿ ಚಿತ್ರೀಕರಣ ನಡೆಯಲಿದೆ. ಒಂದು ಪಾಳಿಯಲ್ಲಿ 10 ಪೊಲೀಸ್ ಸಿಬ್ಬಂದಿಯನ್ನು ಭದ್ರತೆ ನಿಯೋಜಿಸಲಾಗಿದೆ. ಮಾರ್ಚ್ 15ರವರೆಗೆ ಲಲಿತ್ ಮಹಲ್ ಪ್ಯಾಲೇಸ್ ನಲ್ಲಿ ಚಿತ್ರೀಕರಣ ನಡೆಯಲಿದೆ ಎಂದು ಹೇಳಲಾಗಿದೆ.
