ಬಳ್ಳಾರಿ : ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್ ಗೆ ರಾಜಾತಿಥ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಳ್ಳಾರಿ ಜೈಲಿನಲ್ಲಿ ನಟ ದರ್ಶನ್ ವಿಚಾರಣೆ ಮಾಡಲಾಗುತ್ತಿದೆ.
ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ವಿಚಾರ ಸಂಬಂಧ ನಟ ದರ್ಶನ್ ವಿರುದ್ಧ ಈಗಾಗಲೇ ಮೂರು ಪ್ರಕರಣಗಳು ದಾಖಲಾಗಿದ್ದು, ಈ ಪ್ರಕರಣ ಸಂಬಂಧ ದರ್ಶನ್ ವಿಚಾರಣೆ ನಡೆಸಲು ಬೆಂಗಳೂರಿನ ಪೊಲೀಸರು ಬಳ್ಳಾರಿ ಜೈಲಿಗೆ ಆಗಮಿಸಿದ್ದು ವಿಚಾರಣೆ ನಡೆಸುತ್ತಿದ್ದಾರೆ.
ರೌಡಿ ಶೀಟರ್ ಗಳ ಜೊತೆಗೆ ನಟ ದರ್ಶನ್ ಅವರ ಫೋಟೋ ವೈರಲ್ ಆಗಿತ್ತು ಈ ಹಿನ್ನೆಲೆಯಲ್ಲಿ ಆ ಫೋಟೋಗೆ ಸಂಬಂಧಿಸಿದಂತೆ ದೂರು ದಾಖಲಿಸಲಾಗಿದೆ. ಹೀಗಾಗಿ ದರ್ಶನ್ ವಿಚಾರಣೆಗಾಗಿ 24 ಗಂಟೆ ಅನುಮತಿ ಕೋರಲಾಗಿತ್ತು. ನಟ ದರ್ಶನ್ ವಿಚಾರಣೆ ನಡೆಸಿದ ಬಳಿಕ ರೌಡಿ ಶೀಟರ್ ನಾಗನ ವಿಚಾರಣೆ ನಡೆಸಲಿದ್ದಾರೆ.
