ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ1 ಆರೋಪಿಯಾಗಿ ಜೈಲು ಸೇರಿದ್ದ ಪವಿತ್ರಾ ಗೌಡ ಇಂದು ಪರಪ್ಪನ ಅಗ್ರಹಾರದಿಂದ ಬಿಡುಗಡೆಯಾಗಿದ್ದಾರೆ
ನಟ ದರ್ಶನ್, ಆತನ ಗೆಳತಿ ಪವಿತ್ರಾ ಗೌಡ, ಹಾಗೂ ಇತರ ಸಹಚರರಿಗೆ 6 ತಿಂಗಳುಗಳ ಕಾಲ ಜೈಲುವಾಸವಾಗಿದ್ದು, ಶುಕ್ರವಾರದಂದು ಹೈಕೋರ್ಟ್ನ ನ್ಯಾ. ಎಸ್.ವಿಶ್ವಜಿತ್ ಶೆಟ್ಟಿ ಅವರಿದ್ದ ಏಕಸದಸ್ಯ ಪೀಠ ಇವರೆಲ್ಲರಿಗೆ ಜಾಮೀನು ಮಂಜೂರು ಮಾಡಿತ್ತು.
ಇಂದು ಬೆಳಗ್ಗೆ ಬಿಡುಗಡೆಯ ಎಲ್ಲಾ ಪ್ರಕ್ರಿಯೆಗಳು ಮುಗಿದಿದ್ದು, ಪರಪ್ಪನ ಅಗ್ರಹಾರದಿಂದ ಪವಿತ್ರಾ, ಅನುಕುಮಾರ್, ಪ್ರದೂಶ್ ಬಿಡುಗಡೆಯಾದರೆ ಶಿವಮೊಗ್ಗ ಜೈಲಿನಿಂದ ಜಗದೀಶ್, ಲಕ್ಷಣ್, ಕಲಬುರಗಿಯಿಂದ ನಾಗರಾಜ್ ರಿಲೀಸ್ ಆಗಿದ್ದಾರೆ.
