ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ನಟ ದರ್ಶನ್ ಬಳಿಯಿರುವ ಗನ್ ಲೈಸೆನ್ಸ್ ರದ್ದು ಮಾಡಲು ಈಗಾಗಲೇ ಪೊಲೀಸರು ನೋಟಿಸ್ ನೀಡಿದ್ದು, ಇದೀಗ ತಾತ್ಕಾಲಿಕವಾಗಿ ನಟನ ಗನ್ ಲೈಸೆನ್ಸ್ ಅನ್ನು ಅಮಾನತು ಮಾಡಲಾಗಿದೆ ಎಂದು ಪೊಲೀಸ್ ಕಮಿಷನರ್ ದಯಾನಂದ್ ತಿಳಿಸಿದ್ದಾರೆ.
ರೇಣುಕಾಸ್ವಾಮಿ ಕೊಲೆ ಕೇಸ್‍ನಲ್ಲಿ ನಟ ದರ್ಶನ್ ಲೈಸೆನ್ಸ್ ಗನ್ ಬಳಕೆ ಮಾಡಿರೊದು ಎಲ್ಲಿಯೂ ಕಂಡುಬರದ ಕಾರಣಕೇಸ್ ಮುಗಿಯುವ ತನಕ ಅಮಾನತ್ತಿನಲ್ಲಿಡಲು ಪೊಲೀಸರು ನಿರ್ಧರಿಸಿದ್ದಾರೆ.
ಇನ್ನು ಗನ್ ಲೈಸೆನ್ಸ್ ಗೆ ಸಂಬಂಧಪಟ್ಟಂತೆ ಮೂರು ವರ್ಷಕ್ಕಿಂತ ಮೇಲ್ಪಟ್ಟ ಶಿಕ್ಷೆ ವಿಧಿಸಬಹುದಾದ ಕೇಸ್‍ನಲ್ಲಿ ಆರೋಪಿಯಾಗಿರುವ ವ್ಯಕ್ತಿಯ ಬಳಿ ಲೈಸೆನ್ಸ್ ಇರುವ ಗನ್ ಇದ್ದರೆ ಅದನ್ನು ಕೂಡಲೇ ವಶಕ್ಕೆ ಪಡೆಯಲಾಗುತ್ತದೆ. ಅಲ್ಲದೇ ಆ ವ್ಯಕ್ತಿಯ ಲೈಸೆನ್ಸ್ ರದ್ದು ಮಾಡಬಹುದಾಗಿದೆ.
