ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿನಿಮಾದ ನಿರ್ದೇಶಕ ಮಿಲನ ಪ್ರಕಾಶ್ ಅವರಿಗೂ ನೋಟಿಸ್ ನೀಡಿದ್ದರು. ಅದರಂತೆ ನಿನ್ನೆ ಮಿಲನ ಪ್ರಕಾಶ್ ವಿಚಾರಣೆಗೆ ಹಾಜರಾಗಿದ್ದಾರೆ ಎನ್ನಲಾಗಿದೆ. ಇಂದು ಕೂಡ ಮತ್ತೆ ವಿಚಾರಣೆಗೆ ಬರುವಂತೆ ತಿಳಿಸಿದ್ದರಿಂದ ಇಂದು ಕೂಡ ಅವರು ವಿಚಾರಣೆಗೆ ಹಾಜರಾಗಿದ್ದಾರೆ ಎನ್ನಲಾಗಿದೆ.
ಬಸವೇಶ್ವರನಗರ ಪೊಲೀಸ್ ಠಾಣೆಯಲ್ಲಿ ಇಂದು ವಿಚಾರಣೆ ನಡೆಯತ್ತಿದೆ. ಬಿಜೆಪಿ ಶಾಸಕನ ಕಾರು ಚಾಲಕ ಕಾರ್ತಿಕ್ ಪುರೋಹಿತ್ ಹಾಗೂ ನಿರ್ದೇಶಕ ಮಿಲನ ಪ್ರಕಾಶ್ ಅವರನ್ನು ಪೊಲೀಸರು ವಿಚಾರಣೆಗೆ ಕರೆದಿದ್ದಾರೆ.
ನಿನ್ನೆ ಸುಮಾರು ಒಂದುವರೆ ಗಂಟೆ ವಿಚಾರಣೆಯನ್ನು ಮಿಲನ ಪ್ರಕಾಶ ಅವರು ವಿಚಾರಣೆ ಎದುರಿಸಿದ್ದರು, ದರ್ಶನ್ ಜೊತೆಗಿನ ಹಣಕಾಸಿನ ವ್ಯವಹಾರದ ಬಗ್ಗೆ ವಿಚಾರಣೆ ಮಾಡಲಾಗಿತ್ತದೆ.ಎನ್ನುವ ಮಾಹಿತಿ ಲಭ್ಯವಾಗುತ್ತಿದೆ.ಇಂದು ಕೂಡ ದಾಖಲೆಗಳ ಸಮೇತ ವಿಚಾರಣೆಗೆ ಹಾಜರಾಗಲು ಪೊಲೀಸರು ಸೂಚನೆ ನೀಡಿದ್ದರು. ಅದರಂತೆ ವಿಚಾರಣೆಗೆ ಹಾಜರಾಗಿದ್ದಾರೆ.
